ಶಿವಮೊಗ್ಗ:- ಕರ್ನಾಟಕದಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ ಮುಂದುವರಿದಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲೂ ಮಹಿಳೆ ಸಾವನ್ನಪ್ಪಿದ್ದಾರೆ.
ಚೀನಾದಲ್ಲಿ ಹೊಸ ವೈರಸ್ ಆರ್ಭಟ: ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಿ – ಕೇಂದ್ರ ಆರೋಗ್ಯ ಸಂಸ್ಥೆ ಸಲಹೆ
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವಾಗಿದೆ. ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್ನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಕವಿತಾ ಶುಕ್ರವಾರ ಮೃತಪಟ್ಟಿದ್ದಾರೆ. ಕವಿತಾ 2 ದಿನದ ಹಿಂದೆ ಹೆರಿಗೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಬೆಳಗ್ಗೆ 8ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಬಾಣಂತಿ ಕವಿತಾಗೆ ದಿಢೀರ್ ರಕ್ತ ಹೆಪ್ಪುಗಟ್ಟಿತ್ತು. ರಕ್ತ ಹೆಪ್ಪುಗಟ್ಟಿದ್ದರಿಂದ ಬಾಣಂತಿ ಸಾವಾಗಿದೆ.
ಇದರೊಂದಿಗೆ ರಾಜ್ಯದಲ್ಲಿ ಬಾಣಂತಿಯರ ಮರಣ ಮತ್ತಷ್ಟು ಹೆಚ್ಚಾದಂತಾಗಿದೆ. ಬಾಣಂತಿ ಸಾವಿನ ಕುರಿತು ಕುಟುಂಬಸ್ಥರು ಈವರೆಗೆ ದೂರು ನೀಡಿಲ್ಲ ಎನ್ನಲಾಗಿದೆ. ಸದ್ಯ ಕವಿತಾ ಮಗು ಆರೋಗ್ಯವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.