ತಿರುವನಂತಪುರಂ: ಕೇರಳದ (Kerala) ಕೊಚ್ಚಿಯಲ್ಲಿ (Kochi) ನಡೆದ ಕ್ರಿಶ್ಚಿಯನ್ನರ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ (Blast) ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 45 ವರ್ಷದ ಮಹಿಳೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು ಸಾಲಿ ಪ್ರದೀಪ್ (45) ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ 10:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ ಮೃತ ಮಹಿಳೆಯ ಮಗಳು ಲಿಬ್ನಾ ತಿಂಗಳ ಹಿಂದೆ ಸ್ಫೋಟ ಸಂಭವಿಸಿದ ವೇಳೆ ತೀವ್ರವಾದ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಳು. ಆಕೆಯ ಸಹೋದರನ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗಿದೆ. ರಾಜ್ಯ ಆರೋಗ್ಯ ಇಲಾಖೆಯು ಅಧಿಕಾರಿಗಳ ಪ್ರಕಾರ ದುರ್ಘಟನೆಯ ಬಳಿಕ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ವೈದ್ಯಕೀಯ ಮಂಡಳಿಯನ್ನು ರಚಿಸಿದೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ಅಕ್ಟೋಬರ್ 29 ರಂದು ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದವು. ಘಟನೆ ಬಳಿಕ ಡೊಮಿನಿಕ್ ಮಾರ್ಟಿನ್ ಎಂಬಾತ ತಾನೇ ಬಾಂಬ್ಗಳನ್ನು ಸ್ಫೋಟಿಸಿರುವುದಾಗಿ ಹೇಳಿ ಪೊಲೀಸರಿಗೆ ಶರಣಾಗಿದ್ದ. ಇದೀಗ ಆರೋಪಿಯನ್ನು ನವೆಂಬರ್ 15 ರವರೆಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.