ತುಮಕೂರು: ನಟ ದರ್ಶನ್ ಅವರು ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದರು. ಆದರೆ, ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಪರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ ಆಗಿದೆ. ಈ ಕಾರಣಕ್ಕೆ ದರ್ಶನ್ಗೆ ಟೆನ್ಷನ್ ಶುರುವಾಗಿದೆ. ಇದರ ಜೊತೆಗೆ ಮೂವರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಕೋರ್ಟ್ ಜಾಮೀನು ನೀಡಿದ್ದರೂ ಬೆಲ್ ಶೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುವಂತಾಗಿದೆ.
ಕಳೆದ ಸೋಮವಾರ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ಗೆ 57ನೇ ಸಿಸಿಹೆಚ್ ಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು.
ರೈತರಿಗೆ ಸಿಹಿಸುದ್ದಿ; ಮೊಟ್ಟ ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ!
ಜಾಮೀನು ಸಿಕ್ಕಿ 5 ದಿನ ಕಳೆದರೂ ಆರೋಪಿಗಳಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ದೊರೆತಿಲ್ಲ. 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನು ಒಪ್ಪಿಸುವಂತೆ ಕೋರ್ಟ್ ತಿಳಿಸಿದೆ. ಜಾಮೀನು ನೀಡಲು ಶೂರಿಟಿದಾರರು ಸಿಗದೇ ಆರೋಪಿಗಳ ಕುಟುಂಬಸ್ಥರು ಪರದಾಡುವಂತಾಗಿದೆ. ಹೀಗಾಗಿ ಆರೋಪಿಗಳು ಇನ್ನೂ ತುಮಕೂರು ಜಿಲ್ಲಾ ಕಾರಾಗೃಹದಲ್ಲಿದ್ದಾರೆ.
ಕಳೆದ 6 ದಿನಗಳಿಂದ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಇನ್ನು ಜಾಮೀನಿನ ಕಾನೂನು ಪ್ರಕ್ರಿಯೆ ಮುಗಿಯದ ಹಿನ್ನೆಲೆ ಇಂದು ಕೂಡಾ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವುದು ಅನುಮಾನವಾಗಿದೆ. ಶೂರಿಟಿದಾರರನ್ನ ಹೊಂದಿಸಲು ಸಾಧ್ಯವಾಗದ ಕಾರಣ ಆರೋಪಿಗಳ ಕುಟುಂಬಸ್ಥರು ಇಲ್ಲಿಯ ತನಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.