ಬಾಗಲಕೋಟೆ:- ತಾಲೂಕಿನ ಆಲಗೂರು ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿ ಮೂವರು ದುರ್ಮರಣ ಹೊಂದಿದ್ದಾರೆ.
ಮಹಾಂತೇಶ್ ಹೊನಕಟ್ಟಿ, ಭೀಮಪ್ಪ ಗಂಟೆಣ್ಣವರ, ಆನಂದ ಬಾಡಗಿ ಮೃತರು. ನಸುಕಿನ ಜಾವ ಜಮಖಂಡಿಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಜಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ. ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕಗಳು ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.