ಉಡುಪಿ: ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಘಟನೆ ನಡೆದಿದೆ. ಪ್ರೇರಿತ್ ಹಲ್ಲೆಗೊಳಗಾದ ಮಗುವಾಗಿದ್ದು, ಮೈ ಹುಷಾರಿಲ್ಲ ಅಂತ ಪ್ರೇರಿತ್ನನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇರಿತ್ಗೆ ಚಿಕತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.
ನಿಮ್ಮ ಕಣ್ಣುಗಳಲ್ಲೇ ಅಡಗಿದೆ ನಿಮ್ಮ ಆರೋಗ್ಯದ ಗುಟ್ಟು: ಕಣ್ಣಿನ ಮೇಲೆ ಮಧುಮೇಹದ ಪ್ರಭಾವವೇನು ಗೊತ್ತಾ..?
ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪ್ರೇರಿತ್ನನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ನಂತರ, ಅಮಾವಾಸ್ಯೆಬೈಲು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.