ಬೀದರ ಜಿಲ್ಲೆಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ ಬೀಸುವ ಹಿನ್ನೆಲೆ ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತ ಬೀದರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಜನರಿಗೆ ಎಚ್ಚರಿಕೆ ನೀಡಿದೆ. 10 ರಿಂದ 12 ಡಿಗ್ರಿ ಇದ್ದ ತಾಪಮಾನ ಏಕಾಏಕಿ 7 ಡಿಗ್ರಿಗೆ ಇಳಿಕೆಯಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಕನಿಷ್ಟ 5 ರಿಂದ 6 ಡಿಗ್ರಿಗೆ ಇಳಿಕೆಯಾಗುವ ಎಚ್ಚರಿಕೆ ನೀಡಿದೆ.
ಅಪ್ಪಿತಪ್ಪಿಯೂ ಈ ಆಹಾರಗಳ ಜೊತೆ ಬಾಳೆಹಣ್ಣು ತಿನ್ನಬೇಡಿ: ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್!
ಸೂರ್ಯೋದಯಕ್ಕಿಂತ ಮುಂಚೆ ಇಲ್ಲಾ ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಜನರಿಗೆ ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಬೀದರ್ನಲ್ಲಿ ಸಂಪೂರ್ಣವಾಗಿ ತಾಪಮಾನ ಕುಸಿತಗೊಂಡಿದೆ. ಭಾರೀ ಶೀತಗಾಳಿಯಿಂದ ರಣಚಂಡಿ ಚಳಿಗೆ ಗಡಿ ಜಿಲ್ಲೆ ಬೀದರ್ ಜನರು ಅಕ್ಷರಶಃ ತತ್ತರಿಸಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ದಾಖಲಾಗಿದ್ದು, ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿದೆ.