ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
Pavithra Gowda: ನಟಿಯಾಬೇಕೆನ್ನುವ ಕನಸು ಕಂಡಿದ್ದ ಪವಿತ್ರಾ ಗೌಡ ಲೈಫ್ ಹೇಗಿತ್ತು ಗೊತ್ತಾ..?
ಇಂದು ವಿಚಾರಣೆ ನಡೆಸಿದ 82 ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಂಸದ ಎಸ್ಐಟಿ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರ, ಸಿಐಡಿಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.