ಬೆಂಗಳೂರು:- ಖಾಸಗಿ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ರೇವಣ್ಣಗೆ ಕೋರ್ಟ್ ಶಾಕ್ ಕೊಟ್ಟಿದೆ.
ಸಿಲಿಕಾನ್ ಸಿಟಿಯ ಹಲವೆಡೆ ಜೋರು ಮಳೆ.. ರಾಜಧಾನಿ ಮಂದಿ ಕೂಲ್ ಕೂಲ್..!
ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ಸೂಚಿಸಿ ಬೆಂಗಳೂರು ಸೆಷನ್ ಕೋರ್ಟ್, ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇದರಿಂದ ಇಂದೇ ಜಾಮೀನು ನಿರೀಕ್ಷೆಯಲ್ಲಿದ್ದ ಎಚ್ಡಿ ರೇವಣ್ಣಗೆ ನಿರಾಸೆಯಾದಂತಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್, ಎಫ್ಐಆರ್ನಲ್ಲಿ ಜಾಮೀನು ನೀಡಬೇಕಾದ ಆರೋಪಗಳಿವೆ. ಆದರೆ ಮ್ಯಾಜಿಸ್ಟ್ರೇಟ್ಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ರೇವಣ್ಣ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಎಸ್ಐಟಿ ಸಲ್ಲಿಸಿದ ಅರ್ಜಿಯ ವಿವರ ಇನ್ನೂ ಲಭ್ಯವಿಲ್ಲ. ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು. ಆದ್ರೆ, ವಿಶೇಷ ಕೋರ್ಟ್ನ ಜಡ್ಜ್ ಸಂತೋಷ್ ಗಜಾನನ ಭಟ್ ಅವರು, ಈ ಕೂಡಲೇ ಜಾಮೀನು ನೀಡಲು ನಿರಾಕರಿಸಿದ್ದು, ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದೆ.