ಬೆಂಗಳೂರು: ಅತ್ಯಾಚಾರ, ಜೀವ ಬೆದರಿಕೆ ಮತ್ತು ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಪೊಲೀಸ್ ಇನ್ ಸ್ಪೆಕ್ಟರ್ ಟಿ.ಆರ್. ಶ್ರೀನಿವಾಸ್ ವಿರುದ್ಧ ದಾಖಲಾಗಿರುವ ದೂರನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.ಈ ಕುರಿತು ಆರೋಪಿಯ ಪತ್ನಿ ಮುಬಶಿರಾ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ, ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತರು, ಸಿಬಿಐ, ಜೆ.ಸಿ. ನಗರ ಠಾಣಾ ಪೊಲೀಸರು, ಆರೋಪಿ ಟಿ.ಆರ್. ಶ್ರೀನಿವಾಸ್ಗೆ ನೋಟಿಸ್ ಜಾರಿ ಮಾಡಿತು
