ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ (ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್ಐಟಿ (SIT) ಅಧಿಕಾರಿಗಳು, ಹೊಳೆನರಸೀಪುರದ (Holenarasipur) ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.
ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ರೇವಣ್ಣ ವಿರುದ್ಧ ಆರೋಪಿಸಿರುವ ಮಹಿಳೆಯ ಸಮ್ಮುಖದಲ್ಲಿ, ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಮ್ನಲ್ಲಿ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಡಿವೈಎಸ್ಪಿ ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಆಗಮಿಸಿರುವ ಎಸ್ಐಟಿ ತಂಡ ಪರಿಶೀಲನೆ ನಡೆಸುತ್ತಿದೆ. ಮನೆಯಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಇದ್ದು, ಮನೆಯ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.