ದಕ್ಷಿಣ ಕನ್ನಡ:- ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ಜರುಗಿದೆ.
ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆಯಲ್ಲಿ ಏರಿಕೆ, ಇವತ್ತಿನ ದರಪಟ್ಟಿ ಇಲ್ಲಿದೆ!
ಆರೋಪಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಆತನಿಗೆ ಗೂಸಾ ಕೊಡುವ ದೃಶ್ಯ ಮೊಬೈಲ್ವೊಂದರಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.