ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಕೊನೆಯ ಲೀಗ್ ಪಂದ್ಯದಲ್ಲಿ 241 ರನ್ಗಳ ಸಾಧಾರಣ ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ ಕೇವಲ 43 ರನ್ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಳ್ಳುವ ಮೂಲಕ ಭಾರೀ ಸಂಕಷ್ಟಕ್ಕೆ ಸಿಲುಕಿದೆ. ಇನ್ನೆರೆಡು ವಿಕೆಟ್ ಬೇಗ ಉರುಳಿದರೆ, ಭಾರತದ ಪಾಲಿಗೆ ವಿಜಯಲಕ್ಷ್ಮೀ ಸುಲಭವಾಗಿ ಒಲಿಯಲಿದ್ದಾಳೆ.
ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ತಮ್ಮ ಬೌಲಿಂಗ್ನಲ್ಲಿ ಕಮಾಲ್ ಮಾಡುತ್ತಿದ್ದು, ಆಸಿಸ್ ಪಡೆಗೆ ಬಹುದೊಡ್ಡ ಸವಾಲಾಗಿದ್ದಾರೆ. ತಂಡದ ಮೊತ್ತ 16 ರನ್ ಇದ್ದಾಗ 7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಮೊಹಮ್ಮದ್ ಶಮಿ ಓವರ್ನಲ್ಲಿ ಕೊಹ್ಲಿಗೆ ಕ್ಯಾಚಿತ್ತು ನಿರ್ಗಮಿಸುವ ಮೂಲಕ ಆರಂಭಿಕ ಆಘಾತ ನೀಡಿದರು. ಇದರ ಬೆನ್ನಲ್ಲೇ ನಾನೇನು ಕಮ್ಮಿ ಎನ್ನುವಂತೆ ನಿರ್ಣಾಯಕ ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ಮಾಡಿದ ಬುಮ್ರಾ, ಮಿಚೆಲ್ ಮಾರ್ಷ್ (15) ಮತ್ತು ಸ್ಟೀವ್ ಸ್ಮಿತ್ (4) ಅವರನ್ನು ಬಂದಷ್ಟೇ ವೇಗವಾಗಿ ಪೆವಿಲಿಯನ್ ಅಟ್ಟಿದರು. ಕೇವಲ 43 ರನ್ಗೆ ಪ್ರಮುಖ 3 ವಿಕೆಟ್ ಕಳೆದುಕೊಳ್ಳುವ ಮೂಲಕ ಆಸಿಸ್ ಪಡೆ ಇದೀಗ ಸಂಕಷ್ಟಕ್ಕೆ ಸಿಲುಕಿದೆ.
ಸದ್ಯ ಆರಂಭಿಕರಾಗಿ ಕಣಕ್ಕಿಳಿದ ಟ್ರಾವಿಸ್ ಹೆಡ್ ಮತ್ತು ಮಾರ್ನಸ್ ಲಬುಶೇನ್ ಕ್ರೀಸ್ನಲ್ಲಿದ್ದಾರೆ. 10 ಓವರ್ ನಷ್ಟಕ್ಕೆ ಆಸಿಸ್ ಪಡೆ 3 ವಿಕೆಟ್ ನಷ್ಟಕ್ಕೆ 60 ರನ್ ಕಲೆಹಾಕಿದೆ.