ಟೀಂ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಅವರು ಕೊನೆಗೂ ವೃತ್ತಿಪರ ಕ್ರಿಕೆಟ್ ಗೆ ಮರಳಿದ್ದಾರೆ. ಕಳೆದ ವರ್ಷದ ನವೆಂಬರ್ ನಲ್ಲಿ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಕೊನೆಯದಾಗಿ ಶಮಿ ಆಡಿದ್ದರು. ವಿಶ್ವಕಪ್ ವೇಳೆ ಗಾಯಗೊಂಡಿದ್ದ ಶಮಿ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಮತ್ತೆ ರಣಜಿ ಟ್ರೋಫಿ ಮೂಲಕ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ.
ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿದಿರುವ ಮೊಹಮ್ಮದ್ ಶಮಿ ಕಂಬ್ಯಾಕ್ ಪಂದ್ಯದಲ್ಲೇ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸೋ ಷಡ್ಯಂತ್ರ: ಡಿಕೆಶಿ ಆರೋಪ!
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಂಗಾಳ ತಂಡವು ಮೊದಲ ಇನಿಂಗ್ಸ್ನಲ್ಲಿ 228 ರನ್ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಮಧ್ಯ ಪ್ರದೇಶ್ ತಂಡದ ಬ್ಯಾಟಿಂಗ್ ಬೆನ್ನಲುಬು ಮುರಿಯುವಲ್ಲಿ ಮೊಹಮ್ಮದ್ ಶಮಿ ಯಶಸ್ವಿಯಾದರು.
ಮಧ್ಯ ಪ್ರದೇಶ್ ತಂಡದ ನಾಯಕ ಶುಭಮ್ ಶರ್ಮಾ ಅವರನ್ನು ಔಟ್ ಮಾಡಿ ವಿಕೆಟ್ ಖಾತೆ ತೆರೆದ ಮೊಹಮ್ಮದ್ ಶಮಿ ಆ ಬಳಿಕ ಮೂರು ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯ ಪ್ರದೇಶ್ ತಂಡವನ್ನು ಕೇವಲ 167 ರನ್ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.
ಇನ್ನು ಈ ಪಂದ್ಯದಲ್ಲಿ 19 ಓವರ್ಗಳನ್ನು ಎಸೆದಿರುವ ಮೊಹಮ್ಮದ್ ಶಮಿ 54 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇದರೊಂದಿಗೆ ಶಮಿ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದಂತಾಗಿದೆ. ಅಲ್ಲದೆ ಇನ್ನೊಂದೆರಡು ಪಂದ್ಯಗಳಲ್ಲಿ ಕಣಕ್ಕಿಳಿದರೆ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಬಹುದು.
ಇದಕ್ಕೂ ಮುನ್ನ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಗಾಯದ ಕಾರಣ ಕಳೆದೊಂದು ವರ್ಷದಿಂದ ಮೈದಾನದಿಂದ ದೂರವೇ ಉಳಿದಿದ್ದ ಅವರಿಗೆ ರಣಜಿ ಟೂರ್ನಿಯ ಮೂಲಕ ತಮ್ಮ ಫಿಟ್ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಸೂಚಿಸಿದೆ.