ಬೀದರ್ : ಇಂದು 12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಒಬ್ಬರಾದ ಮಡಿವಾಳ ಮಾಚಿದೇವರ ಜಯಂತಿ. ಬೀದರ್ನಲ್ಲಿ ಶರಣ ಶ್ರೇಷ್ಠ ಮಡಿವಾಳ ಮಾಚಿದೇವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೀದರ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಡಿವಾಳ ಮಾಚಿದೇವರ ಜಯಂತಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾದ ಭವ್ಯ ಮೆರವಣಿಗೆ, ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿತು. ಮಡಿವಾಳ ಸಮಾಜ ಹಾಗೂ ಮಡಿವಾಳ ಮಾಚಿದೇವರ ಅಭಿಮಾನಿಗಳು ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ವಿವಿಧ ಶಾಲೆ ಮಕ್ಕಳಿಂದ ಹಾಗು ವಿವಿಧ ತಂಡಗಳು ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗಿಯಾಗಿದ್ರು. ಇದೇ ವೇಳೆ ಛದ್ಮ ವೇಷಧಾರಿಯೊಬ್ಬರು ಮಡಿವಾಳ ಮಾಚಿದೇವರ ವೇಷಧಾರಿ ತೊಟ್ಟು ನೋಡುಗರ ಗಮನ ಸೆಳೆದರು.
12ನೇ ಶತಮಾನದ ಕಾಲದಲ್ಲಿ ಇದ್ದ ಶರಣ ಶ್ರೇಷ್ಠರಾದ ಮಡಿವಾಳ ಮಾಚಿದೇವರು ತಮ್ಮ ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.