ಆಡಿರುವ 6 ಪಂದ್ಯದಲ್ಲಿ ಕೇವಲ 2 ಗೆಲುವು ಸಾಧಿಸಿರುವ ಪಂಜಾಬ್ ಕಿಂಗ್ಸ್ ಪಾಲಿಗೆ ಮುಂದಿನ ಪಂದ್ಯಗಳು ಪಂಜಾಬ್ ಪಾಲಿಗೆ ನಿರ್ಣಾಯಕ ಮ್ಯಾಚ್ಗಳಾಗಿವೆ. ಆದರೆ ಪಂಜಾಬ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ಭುಜದ ನೋವಿನ ಕಾರಣ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಧವನ್ ಮುಂಬರುವ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ.
ಮಿಸ್ಟರ್ ಕುಮಾರಸ್ವಾಮಿ ಹೆದರಿ ಹೋಗಿದ್ದೀಯಾ!?, ನೀನು ಎಂತ ಸುಳ್ಳುಗಾರ ಎಂದು ಗೊತ್ತು – ಡಿಕೆಶಿ ವಾಗ್ದಾಳಿ
ಪ್ರಸ್ತುತ ಮಾಹಿತಿ ಪ್ರಕಾರ, ಶಿಖರ್ ಧವನ್ ಕನಿಷ್ಠ ಏಳರಿಂದ ಹತ್ತು ದಿನಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ. ಇದರ ನಡುವೆ ಪಂಜಾಬ್ ಕಿಂಗ್ಸ್ ತಂಡವು 2 ಪಂದ್ಯಗಳನ್ನಾಡಲಿದ್ದು, ಈ ಪಂದ್ಯಗಳಿಗೆ PBKS ತಂಡದ ನಾಯಕ ಅಲಭ್ಯರಾಗುವುದು ಬಹುತೇಕ ಖಚಿತ
ಹೀಗಾಗಿ ಏಪ್ರಿಲ್ 18 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಏಪ್ರಿಲ್ 21 ರಂದು ಜರುಗಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಕಾಣಿಸಿಕೊಳ್ಳುವುದಿಲ್ಲ.
ಇನ್ನು ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಹಂಗಾಮಿ ನಾಯಕ ಸ್ಯಾಮ್ ಕರನ್ ಮುನ್ನಡೆಸಲಿದ್ದಾರೆ. ಅದರಂತೆ ಯುವ ಆಲ್ರೌಂಡರ್ ಮುಂದಾಳತ್ವದಲ್ಲಿ ಪಂಜಾಬ್ ಕಿಂಗ್ಸ್ ಮುಂದಿನ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ.