ಶಸ್ತ್ರಚಿಕಿತ್ಸೆ ಬಳಿಕ ತಾಯ್ನಾಡಿಗೆ ಬಂದಿಳಿದ ಶಿವರಾಜ್ ಕುಮಾರ್

ಅಮೆರಿಕಾದಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶಿವರಾಜ್ ಕುಮಾರ್ ಇಂದು ತಾಯ್ನಾಡಿಗೆ ಮರಳಿದ್ದಾರೆ. ಮೂತ್ರಕೋಶದ ಕ್ಯಾನ್ಸರ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೆರಿಕಾಗೆ ಶಸ್ತ್ರ ಚಿಕಿತ್ಸೆಗೆ ತೆರಳಿದ್ದರು. ಅಮೆರಿಕಾದ ಖ್ಯಾತ ಕ್ಯಾನ್ಸರ್ ಸೆಂಟರ್ ಮಿಯಾಮಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ ನಟ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇತ್ತೀಚಿಗಷ್ಟೇ ಶಿವಣ್ಣ ತಾಯ್ನಾಡಿಗೆ ಬರುವ ಸಿಹಿ ಸುದ್ದಿಯನ್ನು ಸ್ವತಃ ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿ ತಾಯ್ನಾಡಿಗೆ ಮರಳಿದ್ದಾರೆ. ಅಮೆರಿಕದಿಂದ ದುಬೈಗೆ ಬಂದಿಳಿದು, ಅಲ್ಲಿಂದ ಕನೆಕ್ಟೆಡ್ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. … Continue reading ಶಸ್ತ್ರಚಿಕಿತ್ಸೆ ಬಳಿಕ ತಾಯ್ನಾಡಿಗೆ ಬಂದಿಳಿದ ಶಿವರಾಜ್ ಕುಮಾರ್