ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲು ಮುಂದಾಗಿದ್ದಾರೆ. ಹೀಗಾಗಿ ಒಪ್ಪಿಕೊಂಡಿರೋ ಸಿನಿಮಾಗಳನ್ನು ಕಂಪ್ಲೀಟ್ ಮಾಡಿರುವ ಶಿವಣ್ಣ ಇದೀಗ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ತೆರಳಿ ಮುಡಿ ಕೊಟ್ಟಿದ್ದಾರೆ.
ಶಿವರಾಜ್ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ. ಆ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.
ಚಿಕಿತ್ಸೆಗಾಗಿ ಶಿವರಾಜ್ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.
ಶಿವರಾಜ್ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ನಟನೆಯತ್ತ ಗಮನ ಹರಿಸಲಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈಗ ಅವರು ನಟಿಸಿರೋ ‘45’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗಲಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಈಗ 62 ವರ್ಷ. ಇತ್ತೀಚೆಗೆ ಸ್ವಲ್ಪ ಹೆಲ್ತ್ ಇಶ್ಯೂ ಇದೆ. ಫಾರೀನ್ಗೆ ಹೋಗಿ ಬರ್ತೀನಿ. ಏನು ಭಯ ಪಡೋ ಅಗತ್ಯವಿಲ್ಲ ಎಂದು ಶಿವರಾಜ್ ಕುಮಾರ್ ಅವರೇ ಹೇಳಿದ್ದರು.
ಇಂದು ಬೆಳಗಿನ ಜಾವ ಶಿವಣ್ಣ ದಂಪತಿ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾಜ್ ಕುಮಾರ್ ಜೊತೆಯಲ್ಲಿ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಅಭಿಮಾನಿಗಳು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.