ಬೆಳಗಾವಿ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರು ಆದ ಆರ್.ವಿ ದೇಶಪಾಂಡೆ ಅವರು ನಿನ್ನೇ ದಾಂಡೇಲಿಯ ಆಡಳಿತ ಸೌಧದಲ್ಲಿ ವಿಧಾನಸಭಾ ಸಭಾ ಕ್ಷೇತ್ರದ ವ್ಯಾಪ್ತಿಯ ಟಾಸ್ಕ್ ಪೋರ್ಸ್ ಸಭೆ ನಡೆಸಿ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ನಡೆಸಿದ ಸಂದರ್ಶನದಲ್ಲಿ ಮಾತನಾಡಿ, ಕ್ಷೇತ್ರದ ಸಮಸ್ಯೆಗಳು ಹಾಗೂ ಪರಿಹಾರ ಹಾಗೂ ಚಳಿಗಾಲದ ಅಧಿವೇಶನ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಬರೋದು ಹಾಗೂ ಡಿ.ಕೆ ಶಿವಕುಮಾರ್ ಮೇಲಿನ ಸಿ.ಬಿ.ಐ ತನಿಖೆ ರಾಜ್ಯ ಸರ್ಕಾರ ವಾಪಸ್ ಪಡೆದಿರುವುದು ಹೀಗೆ ಹಲವು ವಿಷಯಗಳ ಪ್ರಶ್ನೆಗಳಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಜಿ ಪ್ಲಸ್ ಟೂ ಬಗ್ಗೆ ವರದಿ ಮಾಡಿ ಸರ್ಕಾರಕ್ಕೆ ಎಚ್ಚರಿಸಿ ಕಾರ್ಯರೂಪಕ್ಕೆ ತೆಗೆದುಕೊಂಡು ಬಂದದಕ್ಕೆ ನಮ್ಮ ನ್ಯೂಸ್ ಸಮೂಹದ ರಾಜ್ಯ ವಿಶೇಷ ಪ್ರತಿನಿಧಿ ಬಸವರಾಜು ಅವರನ್ನು ಆಕ್ರಂ ಖಾನ್ ನೇತೃತ್ವದ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸನ್ಮಾನ ಮಾಡಲಾಯಿತು.