ಗದಗ: ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮ ಹಿನ್ನೆಲೆ ಗದಗ ನಗರದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ.
ವಿಶ್ವನಾಥನ ದರ್ಶನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ವಿಶ್ವನಾಥನಿಗೆ ವಿಶೇಷ ಪೂಜೆ,ಮಹಾಮಂಗಳಾರುತಿ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಭಕ್ತರು ಪಡೆಯುತ್ತಿದ್ದಾರೆ.