ಬೆಂಗಳೂರಿನ ಕೆಆರ್ ಪುರದಲ್ಲಿ ಅತಿ ಹೆಚ್ಚು ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿದ ಕಾರ್ಯಕರ್ತರನ್ನು ಗುರುತಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಬೈರತಿ ಬಸವರಾಜ್ ಸನ್ಮಾನ ಮಾಡಿದರು. ಬಳಿಕ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಜನವರಿ ಅಂತ್ಯದ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನದ ಚುನಾವಣೆ ನಡೆಯಲಿದ್ದು, ಹಾಗಾಗಿ ಬಿಜೆಪಿ ಸದಸ್ಯತ್ವ ನಡೆಸಲಾಗುತ್ತಿದೆ.
GST Council Meetings: ಪಾಪ್ ಕಾರ್ನ್ ಮೇಲೆ 3 ರೀತಿಯ GST! 20ರೂ ಪ್ಯಾಕೆಟ್ ಬೆಲೆ ಎಷ್ಟು ಹೆಚ್ಚಾಗಲಿದೆ ಗೊತ್ತಾ.?
ಅತಿ ಹೆಚ್ಚು ಬಿಜೆಪಿ ಸದಸ್ಯತ್ವ ಮಾಡಿದ ಮುಖಂಡರಿಗೆ ಸನ್ಮಾನ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಕಳೆದ ಬಾರಿ 11 ಕೋಟಿ ಸದಸ್ಯತ್ವ ನೋಂದಣಿಯನ್ನು ಮಾಡಲಾಗಿದೆ. ಈ ಬಾರಿ ಜೆಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ 12 ಕೋಟಿ ಸದಸ್ಯತ್ವ ನೊಂದಣಿ ಮಾಡಿದ್ದೇವೆ ಎಂದರು. ಇದೇ ವೇಳೆ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು. ಇನ್ನೂ ಕೇಂದ್ರ ಸಚಿವೆ ಶೋಭ ಕರಂದ್ಲಾಜೆಗೆ ಶಾಸಕ ಬಿ.ಎ.ಬಸವರಾಜ ಸಾಥ್ ನೀಡಿದರು..