ಭಾರತದಲ್ಲಿ ಈಗ ಚಿನ್ನದ ಬೆಲೆ ಏರಿಕೆಯು ಜನಸಾಮಾನ್ಯರಿಗೆ ಪೀಕಲಾಟ ತಂದಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆ ಶೇ. 6ರಷ್ಟು ಹೆಚ್ಚಳವಾಗಿದೆ.
ಹತ್ತು ದಿನದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ 320 ರೂಗೂ ಹೆಚ್ಚಾಗಿರುವುದು ಗಮನಾರ್ಹ. ಮದುವೆ ಸೀಸನ್ ಇರುವ ಭಾರತದಲ್ಲಿ ಈಗ ಜನರಿಗೆ ಈ ಬೆಲೆ ಏರಿಕೆ ಬಿಸಿ ತಾಕಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 11ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ