ಚಿನ್ನ ಈ ವಾರದ ಕೊನೆಯಲ್ಲಿ ಅದ್ಭುತ ಬೇಡಿಕೆ ಪಡೆದಿದೆ. ಪರಿಣಾಮವಾಗಿ ಬೆಲೆ ಗಣನೀಯವಾಗಿ ಹೆಚ್ಚಾಗಿದೆ.
ಈ ವಾರ ಒಂದು ಗ್ರಾಮ್ ಚಿನ್ನದ ಬೆಲೆ 200 ರುಪಾಯಿಗೂ ಹೆಚ್ಚು ಏರಿರುವುದು ಗಮನಾರ್ಹ. ಅದರಲ್ಲೂ ವಾರಾಂತ್ಯದಲ್ಲಿ ಬರೋಬ್ಬರಿ 130 ರೂಗಳಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಹತ್ತು ದಿನದಲ್ಲಿ ಒಟ್ಟಾರೆ ಒಂದು ಗ್ರಾಮ್ಗೆ 30 ಪೈಸೆ ಮಾತ್ರವೇ ಏರಿರುವುದು. ಆ ಮಟ್ಟಿಗೆ ಬೆಳ್ಳಿ ಹೆಚ್ಚು ಬೇಡಿಕೆ ಪಡೆದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,780 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,580 ರುಪಾಯಿಯಲ್ಲಿ ಇದೆ.
ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 778 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 758 ರೂ