ಬೆಂಗಳೂರು: ಬುಧವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಹೌದು ಫೆಬ್ರವರಿ 26ರ ಬುಧವಾರ ಮಹಾಶಿವರಾತ್ರಿ ಹಬ್ಬ . ಈ ಹಬ್ಬ ಅತ್ಯಂತ ಶಕ್ತಿಯುತ ಮತ್ತು ಪವಿತ್ರ ಹಿಂದೂ ಹಬ್ಬಗಳಲ್ಲಿ ಒಂದಾಗಿದೆ.
ಬ್ಯಾಂಕ್ʼನಲ್ಲಿ ಸಾಲ ಮಾಡಿದ ವ್ಯಕ್ತಿ ಸಾವನ್ನಪ್ಪಿದ್ರೆ ಆ ಸಾಲ ತೀರಿಸೋರು ಯಾರು..? ಇಲ್ಲಿದೆ ಲೋನ್ ರೂಲ್ಸ್
ಈ ದಿನ ಭಕ್ತರು ಶಿವನ ಪ್ರೀತಿ ಮತ್ತು ಭಕ್ತಿಯಲ್ಲಿ ಮುಳುಗುತ್ತಾರೆ. ದೈವಿಕ ಶಕ್ತಿಗಳೊಂದಿಗೆ ಸಂಪರ್ಕ ಸಾಧಿಸಲು ರಾತ್ರಿಯನ್ನು ಧ್ಯಾನ, ಜಪ, ನೃತ್ಯ ಇನ್ನಿತರ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಾರೆ. ಈ ದಿನ ಶಿವನ ಭಕ್ತರು ಬೆಳಗ್ಗೆಯಿಂದ ಸಂಜೆ ವರೆಗೂ ಉಪವಾಸ ಮಾಡುತ್ತಾರೆ.
ಆದ್ದರಿಂದ ಫೆಬ್ರವರಿ 26ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ. ಎಲ್ಲಾ ರೀತಿಯ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ಕಸಾಯಿಖಾನೆ ಮುಚ್ಚುವಂತೆ ಆದೇಶಿಸಿದ್ದು, ಒಂದು ವೇಳೆ ಆದೇಶ ಉಲ್ಲಂಘಿಸಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.