ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ತೀಕ್ಷ್ಣ ಬೆಲೆ ಏರಿಕೆ ಕಂಡಿವೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ರಿಸರ್ವ್ ತನ್ನ ಬಡ್ಡಿದರವನ್ನು ಏರಿಸುವ ಸಾಧ್ಯತೆ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿರುವಂತೆಯೇ ಹೂಡಿಕೆದಾರರು ಚಿನ್ನದ ಮೊರೆ ಹೋಗುತ್ತಿದ್ದಾರೆ. ಈ ಬಾರಿಯ ಬೆಲೆ ಏರಿಕೆ ದೀರ್ಘಕಾಲದ್ದಾಗಿರಲಿದ್ದು, ಸಾವರೀನ್ ಗೋಲ್ಡ್ ಬಾಂಡ್ ಇತ್ಯಾದಿ ಗೋಲ್ಡ್ ಸ್ಕೀಮ್ನಲ್ಲಿ ಹಣ ತೊಡಗಿಸಿದವರು ನಿರಾಳರಾಗಬಹುದು.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,150 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 16ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,040 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 747 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,040 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ