ಬೆಂಗಳೂರು:- ಸಿಇಟಿ (CET) ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ (Engineering College) ಸರ್ಕಾರಿ ಕೋಟಾ ಹಾಗೂ ಕಾಮೆಡ್-ಕೆ ಕೋಟಾ ಸೀಟುಗಳ ಪ್ರವೇಶ ಶುಲ್ಕ 10-15 % ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಇದರ ನಡುವೆ ಈಗ ಖಾಸಗಿ ಖಾಲೇಜುಗಳಲ್ಲಿ ಇಂಜಿನಿಯರಿಂಗ್ ಖಾಸಗಿ ಕೋಟಾ ಸೀಟ್ ಗೆ ಭರ್ಜರಿ ಡಿಮ್ಯಾಂಡ್ ಶುರುವಾಗಿದೆ.
‘ಮಲವಿ’ ಉಪಾಧ್ಯಕ್ಷರಿದ್ದ ಯುದ್ದ ವಿಮಾನ ನಾಪತ್ತೆ: ಮುಂದುವರೆದ ಶೋಧ ಕಾರ್ಯ
ಬೇಡಿಕೆಯ ಬ್ರ್ಯಾಂಚ್ ಸೇರುವ ಪ್ಲಾನ್ ಮಾಡಿಕೊಂಡಿದ್ದಾರೆ. ಆದರೆ ಉತ್ತಮ ರ್ಯಾಂಕ್ ಬಾರದ ವಿದ್ಯಾರ್ಥಿಗಳು ಖಾಸಗಿ ಸೀಟ್ ಕೋಟಾದಡಿ ಖಾಸಗಿ ಇಂಜನಿಯರಿಂಗ್ ಪ್ರವೇಶಾತಿಗೆ ಮುಂದಾಗಿದ್ದಾರೆ. ಈಗ ಈ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳು 20% ರಿಂದ 30 % ಶುಲ್ಕ ಸುಲಿಗೆ ಮಾಡಲು ಮುಂದಾಗಿವೆ. ಬೆಂಗಳೂರಿನ ಪ್ರತಿಷ್ಠಿತ ಇಂಜನಿಯರಿಂಗ್ ಕಾಲೇಜಿನಲ್ಲಿ ಸೀಟ್ ಪಡೆಯಲು 6 ರಿಂದ 10 ಲಕ್ಷ ಶುಲ್ಕ ಕಟ್ಟಬೇಕಾದ ಸ್ಥಿತಿ ಪೋಷಕರಿಗೆ ಬಂದಿದೆ. ಇದರ ನಡುವೆಯೂ ಈ ವರ್ಷ ಇಂಜಿನಿಯರಿಂಗ್ ಶುಲ್ಕ 10-15% ಏರಿಕೆಗೆ ಖಾಸಗಿ ಕಾಲೇಜುಗಳ ಸಂಘಟನೆಯಿಂದ ಸರ್ಕಾರಕ್ಕೆ ಒತ್ತಾಯ ಕೇಳಿ ಬಂದಿದೆ.
ಕಳೆದ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೂ ಪ್ರವೇಶಾತಿ ಶುಲ್ಕ ಶೇ.7% ಹೆಚ್ಚಳ ಮಾಡಲಾಗಿತ್ತು. ಸರ್ಕಾರಿ ಕಾಲೇಜುಗಳಲ್ಲಿ 40 ಸಾವಿರ ರೂ ಶುಲ್ಕ ಹೆಚ್ಚಿಸಲಾಗಿತ್ತು. ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 67 – 68.000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ, ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ ಮಾಡಲಾಗಿತ್ತು. ಆದರೆ ಇದರ ಹೊರತಾಗಿ ಖಾಸಗಿ ಕೋಟ ಸೀಟ್ ಗಳಿಗೆ ಕಾಲೇಜುಗಳು ಮನಸಿಗೆ ಬಂದಷ್ಟು ಶುಲ್ಕ ಪಡೆಯುತ್ತಿದ್ದು ಪೋಷಕರ ಪರದಾಟಕ್ಕ ಕಾರಣವಾಗಿದೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಸೀಟ್ ಪಡೆಯಲು 6 ರಿಂದ 10 ಲಕ್ಷ ನೀಡಬೇಕಿದೆ.
ಆದರೆ ಈ ಬಗ್ಗೆ ಉನ್ನತ್ತ ಶಿಕ್ಷಣ ಸಚಿವರಾದ ಎಂ ಸಿ ಸುಧಾಕರ್ ಮಾತ್ರ ನಮ್ಮಲ್ಲಿ ಶುಲ್ಕ ನಿಯಂತ್ರಣ ಸಮಿತಿ ಇಲ್ಲ. ಹೀಗಾಗಿ ಈ ಸಮಸ್ಯೆ ಇದೆ. ಇನ್ನು ಈ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಹಾಗೂ ಕಾಮೆಡ್-ಕೆ ಕೋಟಾ ಸೀಟುಗಳ ಪ್ರವೇಶ ಶುಲ್ಕ 10-15 % ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ಒತ್ತಾಯ ಮಾಡಿದೆ. ಚರ್ಚೆ ಮಾಡ್ತೀವಿ ಎಂದು ತಿಳಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)