ಹುಬ್ಬಳ್ಳಿ:– ನಟೋರಿಯಸ್ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಲಾಗಿದೆ. ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿಶೀಟರ್ ತಲ್ವಾರ್ ನಿಂದ ಬೀಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ರೌಡಿಶೀಟರ್ ಮೇಲೆ ಫೈಯರ್ ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಫೈರ್ ಮಾಡಿದ್ದಾರೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಮಂಟೂರು ರಸ್ತೆಯಲ್ಲಿ ಸತೀಶ್ ಗೋನಾ ಮೇಲೆ ಫೈರಿಂಗ್ ಮಾಡಲಾಗಿದೆ.
ಶಹರ ಠಾಣೆ ಇನ್ಸ್ಪೆಕ್ಟರ್ ರಫೀಕ್ ತಹಶಿಲ್ದಾರ ಫೈರ್ ಮಾಡಿದ್ದಾರೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ಗೋನಾನನ್ನು ಪೊಲೀಸರು ಬಂಧಿಸಲು ಹೋದಾಗ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ.
ಘಟನೆಯಲ್ಲಿ ಪಿ.ಎಸ್.ಐ ವಿನೋದ್ ದೊಡ್ಡಲಿಂಗಣ್ಣವರ್ ಎಂಬವರಿಗೆ ಗಾಯಗಳಾಗಿವೆ. ಈ ವೇಳೆ ಆರೋಪಿ ಕಾಲಿಗೆ ಫೈರ್ ಮಾಡಿ, ಆರೋಪಿಯನ್ನು ಬಂಧಿಸಿದ್ದಾರೆ. ಮೂರು ಸುತ್ತು ಗುಂಡು ಹಾರಿಸಲಾಗಿದ್ದು, ಒಂದು ಗುಂಡು ಆರೋಪಿಯ ಕಾಲಿಗೆ ತಗುಲಿದೆ.
ಕಾಲಿಗೆ ಗುಂಡು ತಾಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ ಕಮೀಷನರ್ ಹುಬ್ಬಳ್ಳಿಯ ಕಿಮ್ಸ್ ಗೆ ಭೇಟಿ ನೀಡಿದ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್, ಹೆಚ್ಚಿನ ಮಾಹಿತಿ ಪಡೆದರು. ಗಾಯಳು ಪಿಎಸ್ಐ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರೇಣುಕಾ ಸುಕುಮಾರ್, ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದರು. ಕಳೆದ ಹದಿನೈದು ದಿನಗಳಿಂದ ಅವಳಿನಗರದಲ್ಲಿ ಪೊಲೀಸರ ಕಾರ್ಯಾಚರಣೆ ನಡೆದಿದೆ. ಆರೋಪಿ ವಿರುದ್ಧ ಐದು ಪ್ರಕರಣಗಳಿವೆ. ಈತ ನಟೋರಿಯಸ್ ರೌಡಿಶೀಟರ್. ಆರೋಪಿ ಬಂಧನಕ್ಕೆ ಕೋರ್ಟ್ ವಾರೆಂಟ್ ಇತ್ತು. ಎರಡು ವರ್ಷಗಳಿಂದ ಆರೋಪಿ ಸತೀಶ್ ಗೋನಾ ತಲೆ ಮರೆಸಿಕೊಂಡಿದ್ದ. ಪುಡಿ ರೌಡಿ, ನಟೋರಿಯಸ್ ರೌಡಿಗಳ ಮೇಲೆ ಬಿಗಿ ಹಿಡಿತ ಇಟ್ಟಿದ್ದೀವಿ ಎಂದರು.