ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಬಹಿರಂಗವಾಗಿ ವಾಕ್ಸಮರ ನಡೆಸಿದ್ದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮತ್ತೆ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯತ್ನಾಳ್ ಅವರಿಗೆ ಸಿಗಲಿ ; ಕುಂಭಮೇಳದಲ್ಲಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ
ಯತ್ನಾಳ್ ಅವರಿಗೆ ಈ ಹಿಂದೆಯೂ ಸಹ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ಯತ್ನಾಳ್ ಅವರು ಉತ್ತರ ಸಹ ನೀಡಿದ್ದರು. ಆದರೆ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದರು. ಅಲ್ಲದೇ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುತ್ತೇನೆ ಎಂದು ಆಗ್ರಹಿಸಿದ್ದರು. ಇಂದು ಮತ್ತೊಮ್ಮೆ ಯತ್ನಾಳ್ ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ. ನೋಟಿಸ್ ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ. ಇಲ್ಲದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.