ಬೆಂಗಳೂರು: ವಿಷ್ಣುಪ್ರಿಯ ಸಿನಿಮಾ ಪ್ರಮೋಷನ್ಗಾಗಿ ದಾವಣಗೆರೆಗೆ ತೆರಳುತ್ತಿದ್ದ ವೇಳೆ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ಐಷಾರಾಮಿಗೆ ಕಾರು ಅಪಘಾತವಾಗಿರುವ ಘಟನೆ ನಡೆದಿದೆ.
‘ವಿಷ್ಣುಪ್ರಿಯಾ’ ಪ್ರಮೋಷನ್ ಮಾಡಲು ಬೆಂಗಳೂರಿನಿಂದ ದಾವಣಗೆರೆಗೆ ಶ್ರೇಯಸ್ ಬಿಎಂಡಬ್ಲ್ಯೂ ಕಾರಿನಲ್ಲಿ ತೆರಳುತ್ತಿದ್ದರು. ಶಿರಾ ಬಳಿ ಕಾರು ಮತ್ತು ಲಾರಿ ಮಧ್ಯೆ ಅಪಘಾತ ನಡೆದಿದೆ.
Turmeric Milk: ಈ ಸಮಸ್ಯೆಗಳಿದ್ದರೆ ತಪ್ಪಿಯೂ ಅರಿಶಿನ ಮಿಶ್ರಿತ ಹಾಲನ್ನು ಕುಡಿಯಬೇಡಿ!
ಲಾರಿ ಡಿಕ್ಕಿಯಾದ ಹಿನ್ನೆಲೆಯ BMW ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಶ್ರೇಯಸ್ ಮಂಜು ಅಭಿನಯದ ವಿಷ್ಣುಪ್ರಿಯ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಶ್ರೇಯಸ್ ಮಂಜು ಪ್ರಮೋಷನ್ನಲ್ಲಿ ಬ್ಯುಸಿಯಾಗಿದ್ರು. ಈ ಮಧ್ಯೆ ಕಾರಿಗೆ ಲಾರಿ ಡಿಕ್ಕಿಯಾಗಿ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.