ದಕ್ಷಿಣ ಕನ್ನಡ:- ಶ್ರೀಮಹಾಲಿಂಗೇಶ್ವರ ಜಾತ್ರೆ ಹಿನ್ನೆಲೆ ಅಲ್ಲಿನ ಜಿಲ್ಲಾಡಳಿತವು ಪುತ್ತೂರಿನಲ್ಲಿ 2 ದಿನಗಳ ಕಾಲ ಮದ್ಯ ನಿಷೇಧ ಹೇರಿದೆ.
ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ನಿಷೇಧಾಜ್ಞೆ ಆದೇಶಿಸಲಾಗಿರುತ್ತದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಮತ್ತು ವೈನ್ ಶಾಪ್ಗಳನ್ನು ಇಂದು ಬೆಳಗ್ಗೆ 6 ಗಂಟೆಯಿಂದ ಎಪ್ರಿಲ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ ಎನ್ನಲಾಗಿದೆ.