ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ.ಈ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶಾಸಕ ಎನ್.ಹೆಚ್.ಕೊನರೆಡ್ಡಿ ಮಾತನಾಡಿದ್ದು,
‘ ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗುವುದು. ಈ ಬಗ್ಗೆ ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಇದಕ್ಕೆ ಭಯಪಡುವ ಪ್ರಶ್ನೆಯಿಲ್ಲ. ಕಾನೂನು ಹೋರಾಟ ಮಾಡುತ್ತೇವೆ’ ಎಂದರು.
ನಿಮ್ಮ ಬಳಿ ಒಂದಕ್ಕಿಂತ ಹೆಚ್ಚು Pan Card ಇದ್ರೆ ಏನಾಗುತ್ತೆ ಗೊತ್ತಾ.? ಎಷ್ಟು ದಿನ ಜೈಲು ಶಿಕ್ಷೆ.? ದಂಡ ಎಷ್ಟು.?
ಬಿಜೆಪಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಕೇಂದ್ರ ಸರ್ಕಾರ ನೇರವಾಗಿ ಮಧ್ಯೆ ಪ್ರವೇಶಿಸಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ದೇಶದಲ್ಲಿ ಬಿಜೆಪಿ ವಿರುದ್ಧದ ಮುಖ್ಯಮಂತ್ರಿಗಳು ಇರಬಾರದು ಎಂಬ ಸಂಚು ರೂಪಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು.