ಬೆಂಗಳೂರು: ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ, ಡಿಕೆಶಿ ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಕುವೆಂಪು ಅವರ ನಾಡಗೀತೆಯನ್ನು ನೆನಪಿಸಿಕೊಂಡಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟದ ನೆನಪನ್ನು ಅವರು ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ವಿಷಬೀಜವನ್ನು ಬಿತ್ತುವ ಕೆಲಸವನ್ನು ಮಾಡುತ್ತಿದೆ ಎಂಬುದನ್ನು ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಬಯಸುವುದಾಗಿ ವಿಜಯೇಂದ್ರ ಹೇಳಿದರು.
Cockroach Milk: ಜಿರಳೆ ಹಾಲು ಕುಡಿದಿದ್ದೀರಾ? ಇದ್ರಲ್ಲೂ ಅಡಗಿದ್ಯಂತೆ ಅದ್ಭುತ ಆರೋಗ್ಯ ಪ್ರಯೋಜನಗಳು!
ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಮಾಡಲು ಹೊರಟಿದ್ದು, ಇದನ್ನು ಬಿಜೆಪಿ ಪ್ರತಿಭಟಿಸುತ್ತದೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಪ್ರವರ್ಗ 2 ಬಿ ಅಡಿಯಲ್ಲಿ ಜೈನರು ಬರುತ್ತಾರಾ? ಮುಸಲ್ಮಾನರು ಬಿಟ್ಟರೆ ಯಾರು ಬರುತ್ತಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕಿವಿಗೆ ಹೂವಿಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.