ಬೆಂಗಳೂರು:- – ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಹಿರಿಯ ನ್ಯಾಯವಾದಿ ರಾಘವನ್ ಅವರು ನ್ಯಾಯಾಧೀಶರ ಮುಂದೆ ಮಂಡಿಸಿದ ವಾದ ಸಿದ್ದರಾಮಯ್ಯರಿಗೆ ಮುಳುವಾಗಲಿದೆ.
ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗೋದು ಗ್ಯಾರಂಟಿ! ಇಲ್ಲಿದೆ ಡೀಟೇಲ್ಸ್!
ಮುಡಾದಿಂದ ಬದಲಿ ನಿವೇಶನ ಪಡೆದ ಬಹುತೇಕ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದರು. 1997ರಲ್ಲಿ ಮುಡಾದಿಂದ ಸರ್ವೇ ನಂ 464 3.16 ಗುಂಟೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಬಳಿಕ 1998ರಲ್ಲಿ ಭೂಸ್ವಾಧೀನ ಕೈ ಬಿಡಲಾಗಿದೆ. ಈ ವೇಳೆ ಸಿದ್ದರಾಮಯ್ಯನವರು ಡಿಸಿಎಂ ಆಗಿದ್ದರು. 2004ರಲ್ಲಿ ಸಿದ್ದರಾಮಯ್ಯ ಪತ್ನಿ ಸಹೋದರನಿಂದ ಜಮೀನು ಖರೀದಿ ಮಾಡಿದ್ದಾರೆ. 2005ರಲ್ಲಿ ಕೃಷಿಯಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲಾಗಿದೆ. ಈ ವೇಳೆಯೂ ಸಿದ್ದರಾಮಯ್ಯನವರು ಡಿಸಿಎಂ ಆಗಿದ್ದರು ಎಂಬುವುದು ಗಮನರ್ಹ ವಿಚಾರ.
2014ರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಅರ್ಜಿ ಸಲ್ಲಿಸಿದ್ದರು. ನಮ್ಮ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ದಿ ಕಾರ್ಯ ಬಳಸಿಕೊಂಡಿದೆ. ರಸ್ತೆ, ಪಾರ್ಕ್, ನಿವೇಶನ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಬದಲಿ ಭೂಮಿ ನೀಡುವಂತೆ ಪಾರ್ವತಿ ಅವರು ಮನವಿ ಪತ್ರ ಬರೆದಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಸಿಎಂ ಆಗಿದ್ದರು. ಇನ್ನು 2017ರಲ್ಲಿ ಬದಲಿ ಜಮೀನು ನೀಡಲು ಸಭೆ ನಡೆಸಿ ನಿರ್ಣಯ ತೆಗೆದುಕೊಳ್ಳಲಾಯಿತು. ಈ ವೇಳೆಯೂ ಸಿದ್ದರಾಮಯ್ಯ ಸಿಎಂ ಆಗಿದ್ದರು. ಈ ಎಲ್ಲಾ ಕಾರಣಗಳಿಂದ ಸಿದ್ದರಾಮಯ್ಯ ಪ್ರಭಾವ ಕೆಲಸ ಮಾಡಿರುವ ಆರೋಪ ಕೇಳಿ ಬಂದಿದೆ.
2004ರಲ್ಲಿ ಖರೀದಿ ಮಾಡಿದ್ದ ಜಮೀನು 2010ರಲ್ಲಿ ದಾನ ರೂಪವಾಗಿ ಸಿದ್ದರಾಮಯ್ಯ ಪತ್ನಿಗೆ ಸಿಕ್ಕದೆ. 2001ರಲ್ಲಿ ಮುಡಾ ಸದರಿ ಜಮೀನಿನಲ್ಲಿ ನಿವೇಶನ, ರಸ್ತೆ, ಉದ್ಯಾನವನ ನಿರ್ಮಾಣದ ಬಗ್ಗೆ ಖುದ್ದು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.