ಬೆಂಗಳೂರು:- ಡ್ರಗ್ಸ್ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟಾಸ್ಕ್ಫೋರ್ಸ್ ಸಮಿತಿ ರಚಿಸಿದೆ. 7 ಸಚಿವರನ್ನೊಳಗೊಂಡ ಟಾಸ್ಕ್ಫೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದ್ದ, ಇನ್ನುಳಿದ 6 ಸಚಿವರುಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಗೃಹ ಸಚಿವ ಪರಮೇಶ್ವರ್ ಅವರನ್ನು ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾನ್ನಾಗಿ ನೇಮಕ ಮಾಡಿದ್ದರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಈ ಸಮಿತಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ
ತಿಂಗಳಿಗೊಮ್ಮೆ ಸಭೆ ನಡೆಸಿ ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸಮಿತಿ ಸದಸ್ಯರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ತಡೆಗಟ್ಟಲು ರಾಜ್ಯ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಆದ್ರೆ, ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.