ಕದರಮಂಡಲಗಿ :- ಯುವಕರು ಮನಸ್ಸು ಮಾಡಿದರೆ ಏನೆಲ್ಲ ಸಾಧಿಸಬಹುದು ಎನ್ನುವುದಕ್ಕೆ ತಾಲ್ಲೂಕಿನ ಸುಕ್ಷೇತ್ರ ಕದರಮಂಡಲಗಿ ಗ್ರಾಮದಲ್ಲಿ 1ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಕಟ್ಟಡವೇ ಸಾಕ್ಷಿಯಾಗಿದೆ.
ಈ ಶಾಲೆಯಲ್ಲಿ ಕಲಿತು ವಿದೇಶದಲ್ಲಿ ನೆಲೆಸಿರುವ, ಆರ್ಟಿಒ, ಕೆಎಸ್ಆರ್ಟಿಸಿ, ಶಿಕ್ಷಣ, ಪೊಲೀಸ್ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಕೆಲಸ ಮಾಡುವ ಹಾಗೂ ಬೀಜೋತ್ಪಾದಕ ಕಂಪನಿಗಳನ್ನು ಸ್ಥಾಪಿಸಿಕೊಂಡ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಗುಂಪು ರಚಿಸಿಕೊಂಡು ನೆರವು ಪಡೆದುಕೊಳ್ಳಲಾಗಿದೆ.
ನಾವು ಕಲಿತ ಶಾಲೆ ಉಳಿಸಿ ಬೆಳಸಬೇಕು ಎಂದು ಇಷ್ಟು ದೊಡ್ಡ ಮೊತ್ತದ ಹಣ ಸಂಗ್ರಹ ಮಾಡಿ ಈ ಸುಸಜ್ಜಿತ ಶಾಲೆ ನಿರ್ಮಾಣ ಮಾಡಲಾಗಿದೆ.
ಇನ್ಮೂ ಈ ಶಾಲೆಯನ್ನು ಸ್ವತಃ
ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಉದ್ಘಾಟನೆ ಮಾಡಲಿದ್ದಾರೆ, ಈ ಹಳೆಯ ವಿದ್ಯಾರ್ಥಿಗಳು ಮಾಡಿರುವ ಕಾರ್ಯಕ್ಕೆ ಇದೀಗ ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.