ಹುಬ್ಬಳ್ಳಿ: ಅಕ್ಕಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾ ಮಯ್ಯನವರು ಕಳೆದ ವರ್ಷ ನಾನು ಕೇಳಿದಾಗ ಅಕ್ಕಿ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ನಾವು ಕಳೆದ ಬಾರಿ ಹೊಸ ಅಕ್ಕಿ ಸ್ಟಾಕ್ಗೆ ಬಹಳ ಹತ್ತಿರ ಇದ್ದೇವು. ಇಡೀ ದೇಶದಲ್ಲಿ ಅಕ್ಕಿ ಸಂಗ್ರಹ ಕಡಿಮೆಯಾಗುತ್ತದೆ ಎಂಬ ಆತಂಕವಿತ್ತು. ಹೀಗಾಗಿ ೨೦೨೩ ಜೂನ್ ೧೩ಕ್ಕೆ ಓಪನ್ ಮಾರ್ಕೆಟ್ ಸಪೋರ್ಟ್ ಸಿಸ್ಟಮ್ನಲ್ಲಿ ನಾವು ನಿಲ್ಲಿಸಿದ್ದೇವು ಎಂದರು. ರಾಜ್ಯ ಸರ್ಕಾರದವರು ಜನತೆಗೆ ಐದು ಕೆ.ಜಿ. ಅಕ್ಕಿ ಬದಲು ಹತ್ತು ಕೆ.ಜಿ. ಬೇಕೋ ಬೇಡವೋ ಎಂದು ಜನರಿಗೆ ಕೇಂದ್ರ ಸರ್ಕಾರ ಕೊಟ್ಟರೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿರಲಿಲ್ಲ.
Ladyfinger Benefits: ಮಧುಮೇಹಿಗಳಿಗೆ ಬೆಂಡೆಕಾಯಿ ಸೇವನೆ ಯಾವ ರೀತಿ ಸಹಾಯ ಮಾಡುತ್ತೆ ಗೊತ್ತಾ..?
ಇದೀಗ ಕೇಂದ್ರದ ಬಳಿ ೩೩೦ ಲಕ್ಷ ಟನ್ ಅಕ್ಕಿ ಸಂಗ್ರಹ ಆಗಿರುವುದರಿಂದ ನಾವು ಈಗ ಓಪನ್ ಮಾರ್ಕೆಟ್ ಸಪೋರ್ಟ್ ಸಿಸ್ಟಮ್ನಲ್ಲಿ ರಾಜ್ಯಕ್ಕೂ, ಖಾಸಗಿಯವರಿಗೂ ಅಕ್ಕಿ ನೀಡಲು ಅವಕಾಶ ನೀಡಿದ್ದೇವೆ. ಈ ಹಿಂದೆ ಒಂದು ಕೆ.ಜಿ. ಅಕ್ಕಿಗೆ ೩೪ ರೂ. ಇದ್ದ ದರವನ್ನು ಈಗ ೨೮ ರೂ. ಗೆ ಇಳಿಸಿದ್ದೇವೆ. ಇದು ನರೇಂದ್ರ ಮೋದಿಯವರು ಮಾಡಿರುವ ಉತ್ತಮ ನಿರ್ಧಾರವಾಗಿದೆ ಎಂದು ಹೇಳಿದರು.