ಮೈಸೂರು: ಸಿದ್ದರಾಮಯ್ಯ ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ ಎಂದು ಜಿ ಟಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನಗೆ ಯಾವತ್ತಿಗೂ ಸಿದ್ದರಾಮಯ್ಯ ಖುದ್ದಾಗಿ ಕಾಂಗ್ರೆಸ್ ಗೆ ಬಾ ಎಂದು ಕರೆದಿಲ್ಲ. ನಾನು ದಸರಾದಲ್ಲಿ ಅವರ ಜೊತೆ ವೇದಿಕೆ ಹಂಚಿಕೆ ಕೊಂಡಿದ್ದು ಬಿಟ್ಟರೆ ಮತ್ತೆ ನಾನು ಅವರನ್ನ ಭೇಟಿ ಮಾಡಿಲ್ಲ.
ಅವರು ಇವತ್ತಲ್ಲ ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ. ಯಾವುದೊ ಸಭೆಯಲ್ಲಿ ಹೇಳಿರಬಹುದು. ಅದು ನನಗೆ ಗೊತ್ತಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.ಜಿ.ಟಿ ದೇವೇಗೌಡನಿಗೆ ವಯಸ್ಸಾಗಿದೆ. ರಾಜಕೀಯದಿಂದ ನಿವೃತ್ತಿಯಾಗಲಿ. ನಮಗೆ ಅವರ ಮಗ ಜಿ.ಟಿ ಮಗ ಸಾಕು ಎಂಬ ಆದೇಶ ಅವರಿಂದ ಆಗಿದೆ.
Health Tips: ಬೂದುಕುಂಬಳ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?
ನನಗೆ ರಾಜಕೀಯದಿಂದ ನಿವೃತ್ತಿಕೊಡಿಸಲು ಅವರು ತಯಾರಿದ್ದಾರೆ. ಅವರಿಗೂ ಗೊತ್ತು ಕಾಂಗ್ರೆಸ್ ಹೌಸ್ ಫುಲ್ ಆಗಿದೆ. ಜೆಡಿಎಸ್ ಬಿಜೆಪಿ ಜೊತೆಯಲ್ಲಿ ಒಂದಾಗುವೆ. ಅಲ್ಲಿಗೆ ಜಿ.ಟಿ.ಡಿಗೆ ಸ್ಥಾನ ಇಲ್ಲ. ಹೀಗಾಗಿ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಭಾವನೆಯಲ್ಲಿದ್ದಾರೆ ಎಂದರು.