ಬೆಂಗಳೂರು;- ಉಪಾಹಾರ ಸಭೆಯಲ್ಲಿ ಸಿ.ಎಂ ವಿಚಾರ ನಾನೇ ಪ್ರಸ್ತಾಪ ಮಾಡಿದ್ದೆ ಸಿದ್ದರಾಮಯ್ಯ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಬಗ್ಗೆಯೂ ಕೆಲವು ನಿರ್ದೇಶನ ನೀಡಿದ್ದೇನೆ’ ಎಂದು ಹೇಳಿದರು. ‘ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲ ಕೊಡುತ್ತೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿರುವುದು ವ್ಯಂಗ್ಯವಾಗಿಯೇ ಹೊರತು, ಅದರಲ್ಲಿ ಬೇರೇನೂ ಇಲ್ಲ. ವ್ಯಂಗ್ಯವಾಗಿ ಹೇಳಿದ್ದಾರೆ ಎಂದು ಖುದ್ದು ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಮೊದಲು ಅವರು ಎನ್ಡಿಎ ಬಿಟ್ಟು ಹೊರಬರಲಿ ಎಂದೂ ಹೇಳಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆಯಲ್ಲಾ ಎನ್ನುವುದೇ ಖುಷಿ ನನಗೆ’ ಎಂದು ನಗುತ್ತಾ ಹೇಳಿದರು.
‘ಬಿಜೆಪಿ ಮತ್ತು ಜೆಡಿಎಸ್ನವರು ರಾಜಕೀಯವಾಗಿ ಹತಾಶರಾಗಿದ್ದಾರೆ. ಆದ್ದರಿಂದಲೇ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಇಲ್ಲಸಲ್ಲದ್ದನ್ನು ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಅವರ ಪತಿ ಊರಿನಲ್ಲಿದ್ದರು ಎಂದು ತಿಳಿದುಬಂದಿದೆ. ಕಾರಣ ಗೊತ್ತಾಗಿಲ್ಲ. ತನಿಖೆ ನಡೆಯುತ್ತಿದೆ’ ಎಂದರು.