ಮೇಕೆದಾಟು ಜಾರಿಗಾಗಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಂಡಿದ್ದು, ಹೀಗಾಗಲೇ ಕಾಂಗ್ರೆಸ್ ನಾಯಕರು ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಅದರಂತೆ ಬೆಂಗಳೂರಿನ ಪ್ರತಿಷ್ಠಿತ ಓರಿಯಾನ್ ಮಾಲ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾದಯಾತ್ರೆಗೆ ಬೇಕಾದ ಎರಡು ಜೊತೆ ಶೂ ಖರೀದಿಸಿದ್ದಾರೆ. ಇನ್ನೂ ಜನವರಿ ಓಂಭತ್ತರಿಂದ ಮೇಕೆದಾಟು ಜಾರಿಗಾಗಿ ಕಾಂಗ್ರೆಸ್ ಭರ್ಜರಿ ತಯಾರಿ ಮಾಡಿಕೊಂಡಿದ್ದು, ಈಗಾಗಲೇ ಪಾದಯಾತ್ರೆಯ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ಇನ್ನೂ ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಪಾದಯಾತ್ರೆ ವಾಪಸ್ ಪಡೆಯುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದರು. ಆದರೆ ಯಾರು ಏನೇ ಹೇಳಿದರು ರಾಜ್ಯಕ್ಕಾಗಿ ಮಾಡುವ ಹೋರಾಟ ನಿಲ್ಲುವುದಿಲ್ಲ ಎಂದು ಡಿಕೆ ಶಿವಕುಮಾರ್ & ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
