ಬೆಂಗಳೂರು: ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ.ಇದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ.
ʼಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಕಾರ್ಯಕ್ರಮಕ್ಕೆ ಡಿಸಿಎಂ ಚಾಲನೆ!
ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ. ಕಾಂಗ್ರೆಸ್ ಅವರು ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಕರಸೇವಕರ ಮೇಲೆ ದೌರ್ಜನ್ಯ. ಇದು ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು
ಅಧಿಕಾರ ದುರುಪಯೋಗ, ಸುಳ್ಳು ಕೇಸ್ ಮೂಲಕ ಕರಸೇವಕರ ಬಂಧನ ವಿಚಾರವಾಗಿ ಸಿಎಂ, ಗೃಹ ಸಚಿವರು ಅದನ್ನ ಸಮರ್ಥನೆ ಮಾಡಿಕೊಳ್ತಿದ್ದಾರೆ. ಹರಿಪ್ರಸಾದ್ ಗೋಧ್ರಾ ರೀತಿ ಆಗುತ್ತೆ ಅಂತಾ ಹೇಳಿದ್ದಾರೆ. ಪರ-ವಿರೋಧ ಎರಡು ಕಡೆ ನಡೆಯುತ್ತಿದೆ. ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ತಿದೆ. ಬಿಜೆಪಿ ನಾಯಕರು, ಕಾರ್ಯಕರ್ತರು, ಸಂಘಟನೆಗಳ ಮತ್ತು ವ್ಯಕ್ತಿಗಳ ಮೇಲೆ ಕೇಸ್ ಹಾಕುತ್ತಿದ್ದು, ಅಧಿಕಾರ ದುರುಪಯೋಗ ಆಗ್ತಿದೆ. ಇದಕ್ಕೆ ಬಿಜೆಪಿ ಪ್ರತಿಭಟನೆ ಪ್ರಾರಂಭ ಮಾಡಿದೆ ಎಂದು ಹೇಳಿದ