ಬೆಂಗಳೂರು: ಶ್ರೀರಾಮನ ಕುರಿತು ತಪ್ಪಾಗಿ ಮಾತನಾಡಿದ ಸಚಿವ ರಾಜಣ್ಣನ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷಮೆ ಕೇಳಬೇಕು, ಅಥವಾ ರಾಜಣ್ಣನ ಮೂಲಕ ಕ್ಷಮೆ ಕೇಳಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ.ಸದಾನಂದಗೌಡ (DV Sadananda Gowda) ಅವರು ಆಗ್ರಹಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದ ಮುಳಬಾಗಿಲಿನ ಬ್ಯಾನರ್ ಹರಿದರಲ್ಲವೇ? ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಪ್ರಶ್ನಿಸಿದರು. ಮುಂದೆ ಸಿದ್ದರಾಮಯ್ಯನವರ ಫೋಟೊ ಇರುವ ಬ್ಯಾನರ್ಗಳು ಹರಿದುಹೋಗುವ ದಿನ ಬರಲಿದೆ ಎಂದು ಎಚ್ಚರಿಸಿದರು.
How to Peel Ginger: ಸಿಂಪಲ್ ಟ್ರಿಕ್ಸ್ ಮೂಲಕ ಶುಂಠಿ ಸಿಪ್ಪೆ ಫಟಾಫಟ್ ಆಗಿ ಸುಲಿಯಬಹುದು..!
ರಾಜಣ್ಣ ಅವರಿಗೆ ಕಾಲ ಮಿಂಚಿಲ್ಲ. ಆ ಗೊಂಬೆ ಮುಂದಿನ ದಿನಗಳಲ್ಲಿ ಉರುಳಾಗಿ ಕಾಡಲಿದೆ. ರಾಜಣ್ಣನಿಗೆ ಬೊಂಬೆ ಕಂಡಿತೇ? ಅರಶಿನ ಕಾಮಾಲೆ ರೋಗದವರಿಗೆ ಅರಶಿನವಾಗಿಯೇ ಕಾಣುತ್ತದೆ. ಸಹಕಾರ ಸಚಿವನಾಗಿ ಮಾಡಿದ್ದಾರೆ. ಛೇ, ಸಿದ್ದರಾಮಯ್ಯರಿಂದ ಕೆಟ್ಟ ಕೆಲಸವಿದು. ಸಿದ್ದರಾಮಯ್ಯರ ಓಲೈಕೆ ಮುಂದುವರಿದಿದೆ. ಈ ವ್ಯವಸ್ಥೆಯಿಂದ ಕಾಂಗ್ರೆಸ್ (Congress) 3 ಹೋಳಾಗಲಿದೆ. ಬಹಳ ದಿನ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಕಿಡಿಕಾರಿದರು.