ಬೆಂಗಳೂರು: ಸೋಮವಾರದ ಒಳಗೆ ಬರ ಪರಿಹಾರ (Drought Relief) ಕೊಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಪ್ರತಿಭಟನೆಗೆ (Protest) ನಿರ್ಧರಿಸಿದೆ.
ಇಂದು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವರು, ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ಇದುವರೆಗೆ ಕೇಂದ್ರ ಮಾಡಿರುವ ಅನ್ಯಾಯ ಖಂಡಿಸಿ ಪ್ರತಿಭಟಿಸಲು ನಿರ್ಧರಿಸಲಾಗಿದೆ.
DRUMSTICK LEAVES: ನುಗ್ಗೆಕಾಯಿ ಮಾತ್ರ ಅಲ್ಲ, ನುಗ್ಗೆ ಸೊಪ್ಪಲ್ಲೂ ಅಡಗಿದೆ ಆರೋಗ್ಯದ ಗುಟ್ಟು!
ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸೋಮವಾರ ಸುಪ್ರೀಂಕೋರ್ಟ್ಗೆ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.