ಹುಬ್ಬಳ್ಳಿ:- ಸಿದ್ದರಾಮಯ್ಯರ ರಾಜೀನಾಮೆ ಖಚಿತ, ಇದರಲ್ಲಿ ಅನುಮಾನ ಬೇಡ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲದಿದ್ದರೆ ಶಾಸಕರನ್ನು ಸಿಎಂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿರಲಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
Kolkata Docter Rape and Murder Case: ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟ
ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲದಿದ್ದರೆ ಶಾಸಕರನ್ನು ಸಿಎಂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡ್ತಿರಲಿಲ್ಲ. ನಿನ್ನೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದನ್ನು ನೋಡಿದರೆ ಸತ್ಯ ಅನಿಸುತ್ತೆ. ನಾನು ಬಂಡೆಗಲ್ಲಿನಂತೆ ನಿಲ್ಲುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮುಡಾದಲ್ಲಿ ಸಾಕಷ್ಟು ಅವ್ಯವಹಾರವಾಗಿದೆ, ಸಿಎಂ ಬದಲಾವಣೆ ಕಾಲ ಸನ್ನಿಹಿತ. ಸಿಎಂ ರಾಜೀನಾಮೆ ಕೊಡುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಮುಡಾ ಹಗರಣ, ವಾಲ್ಮೀಕಿ ಹಗರಣದಲ್ಲಿ ಸಿಎಂ ನೇರವಾಗಿ ಭಾಗಿ ಆಗಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೆ ಕೊಡುತ್ತಾರೆ ಎಂದು ಹೇಳಿದರು.
ಸರ್ಕಾರ ಬಂದು 18 ತಿಂಗಳಾದರೂ ಉತ್ತರ ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ/ ರೈತರ ಪರವಾದ ಕಾಳಜಿ ಇಲ್ಲ, ಇದು ನಿಷ್ಕ್ರಿಯ ಸರ್ಕಾರ. ಕರ್ನಾಟಕದ ಜನತೆಗೆ ಕಾಂಗ್ರೆಸ್ ಸರ್ಕಾರ ಇದ್ದು ಸತ್ತಂತೆ ಎಂದು ವಾಗ್ದಾಳಿ ನಡೆಸಿದ ವಿಜಯೇಂದ್ರ, ನಮ್ಮ ಕುಟುಂಬದ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಬಳಿ ದಾಖಲೆ ಇದ್ದರೆ ಕೊಡಲಿ. ಎಲ್ಲವೂ ಯುಪಿಎ ಕಾಲದಲ್ಲಿ ಆಗಿದ್ದು, ಎಲ್ಲವೂ ಇತ್ಯರ್ಥ ಆಗಿವೆ. ಯಾರು ಯಾರನ್ನ ಮುಗಿಸುತ್ತಾರೆಂದು ನೋಡೋಣ ಎಂದು ತಿರುಗೇಟು ನೀಡಿದರು.
ಇವರು ಅವರ ಮೇಲೆ ಕೇಸ್ ಇದೆ ಎಂದು ಬೊಬ್ಬೆ ಹಾಕುತ್ತಿದ್ದಾರೆ. ನಮ್ಮದು ಕೇಸ್ ಇದ್ದರೆ ಹೊರತರಲಿ, ಭ್ರಷ್ಟ ಸರ್ಕಾರ ತೆಗೆಯುತ್ತೇವೆ. ಭ್ರಷ್ಟ ಸರ್ಕಾರ ತೆಗೆಯುವುದು ನಮ್ಮ ಕರ್ತವ್ಯ. ಯಡಿಯೂರಪ್ಪ ವಿರುದ್ಧದ ಕೇಸ್ ಪಟ್ಟಿ ಮಾಡಲು ಖುದ್ದು ಸಿಎಂ ಹೇಳಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.