ಮೈಸೂರು:- ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗಬೇಕು : ಕರವೇ ಪ್ರತಿಭಟನೆ
ಈ ಸಂಬಂಧ ಮಾತನಾಡಿದ ಅವರು,ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ ಹಿಂದೆ ಶಾಸಕರಾಗಿದ್ದರು, ಅವರಿಗೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಎಂಎಲ್ಸಿ ವಿಶ್ವನಾಥ್ ಬಳಿ ಸಾಕ್ಷ್ಯಾಧಾರ ಇದ್ದರೆ ಕೊಡಲಿ ಎಂದು ಸ್ಪಷ್ಟಪಡಿಸಿದರು
ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಇದೆ ಎಂಬ ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಯತೀಂದ್ರ ಅವರ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ ಈಗ ಎಂಎಲ್ಸಿ ಆಗಿದ್ದಾರೆ. ಈ ಹಿಂದೆ ಶಾಸಕರಾಗಿದ್ದರು ಇದಕ್ಕೂ ಅವರಿಗೂ ಸಂಬಂಧವಿಲ್ಲ. ಹೆಚ್. ವಿಶ್ವನಾಥ್ ಅವರು ನಮಗಿಂತ ಹಿರಿಯರು. ಯತೀಂದ್ರ ಬಗ್ಗೆ ಹೇಳೋದಕ್ಕೆ ಏನು ಸಾಕ್ಷಿಯಿದೆ? ಅವರ ಹೇಳಿಕೆಯನ್ನ ಆ ದೇವರೇ ಮೆಚ್ಚಬೇಕು. ವಿಶ್ವನಾಥ್ ಅವರ ಬಳಿ ಸಾಕ್ಷಿ ಇದ್ದರೆ ತಂದು ಕೊಡಲಿ ಎಂದರು.
ಇನ್ನೂ ಮುಡಾ ದಾಖಲಾತಿಗಳನ್ನ ಪೆನ್ಡ್ರೈವ್ನಲ್ಲಿ ಹಾಕಿ ಕೊಡುವಂತೆ ಕೇಳಿದ್ದ ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಪೆನ್ಡ್ರೈವ್ ಸಂಸ್ಕೃತಿ ಇಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ, ವಿಶ್ವನಾಥ್ ಈಗ ಮಾತನಾಡುತ್ತಿದ್ದಾರೆ. ನನ್ನ ಬಳಿ ಸೈಟ್ ಕೊಡಿಸುವಂತೆ ವಿಶ್ವನಾಥ್ ಬಂದಿದ್ದರು. ಅದನ್ನ ನೆನಪು ಮಾಡಿಕೊಳ್ಳಲಿ. ಸುಮ್ಮನೆ ಆರೋಪಗಳನ್ನ ಮಾಡುವುದನ್ನ ನಿಲ್ಲಿಸಬೇಕು ಎಂದು ವಾಗ್ದಾಳಿ ನಡೆಸಿದರು.