ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಸಿ.ಎಲ್. ಸೇತುವೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಯನ್ನು ಇಂದು ವಿಕ್ಷಿಸಿದ ಸಂಸದ ಸಿದ್ದೇಶ್ವರವರು ತದ ನಂತರ ಗ್ರಾಮದಲ್ಲಿ 15 ಲಕ್ಷ ರೂ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.
ನಂತರ ತಾಲ್ಲೂಕಿನ ಕಮಲಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದಲ್ಲದೇ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಶಾಸಕ ಎಸ್.ರಾಮಪ್ಪ, ಮಾಜಿ ಶಾಸಕರಾದ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ.ಎಂ.ವಾಗೀಶ್ ಸ್ವಾಮಿ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
