ಮಂಡ್ಯ: ಖಾಸಗಿ ಶಾಲೆಯಲ್ಲಿ ಕ್ರಿಸ್ ಮಸ್ ಆಚರಣೆ ಹಿನ್ನೆಲೆ ಶಾಲೆಗೆ ಮುತ್ತಿಗೆ ಹಾಕಿ ಕ್ರಿಸ್ ಮಸ್ ಆಚರಣೆಗೆ ಅಡ್ಡಿಪಡಿಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಕ್ರಿಸ್ ಮಸ್ ಆಚರಣೆಗೆ ವಿರೋಧ ವ್ಯಕ್ತವಾಗಿದೆ. ಪಾಂಡವಪುರದ ನಿರ್ಮಲಾ ಕಾನ್ವೆಂಟ್ ನಲ್ಲಿ ಘಟನೆ ನಡೆದಿದೆ. ಕ್ರಿಸ್ ಮಸ್ ಹೆಸರಿನಲ್ಲಿ ಮಕ್ಕಳನ್ನು ಕ್ರೈಸ್ತ ಧರ್ಮಕ್ಕೆ ಆಕರ್ಷಿತವಾಗುತ್ತಿದೆ. ಇದರಿಂದ ಮಕ್ಕಳ ನಡುವಳಿಕೆಯಲ್ಲಿ ಬದಲಾವಣೆ ಕಾಣುತ್ತಿದೆ. ಬಾಲ್ಯದಲ್ಲೇ ಕ್ರೈಸ್ತ ಧರ್ಮಕ್ಕೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಮಾಡಿ ಹಬ್ಬ ಆಚರಣೆಗೆ ಅಡ್ಡಿಪಡಿಸಲಾಗಿದೆ.
ಶಾಲಾ, ಕಾಲೇಜುಗಳು ಧರ್ಮಾತೀತವಾಗಿರಬೇಕು. ನಿರ್ಮಲ ಕಾನ್ವೆಂಟ್ ನಲ್ಲಿ ಕ್ರಿಸ್ ಮಸ್ ಆಚರಣೆ ಧರ್ಮ ಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಕ್ರಿಸ್ ಮಸ್ ಆಚರಣೆ ಮಾಡಲೇಬೇಕು ಅನ್ನೋದಾದ್ರೆ ಹಿಂದೂ ದೇವರ ಭಾವಚಿತ್ರ ಹಾಕಲು ಪಟ್ಟು ಹಿಡಿದಿದ್ದಾರೆ. ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿಗೆ ಹಿಂದೂ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಾರೆ.
