ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣದ ಸಂಬಂಧ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಹೆಬ್ಬಗೋಡಿ ಇನ್ಸ್ಪೆಕ್ಟರ್ ಐಯನ್ ರೆಡ್ಡಿಯನ್ನು ಬಂಧಿಸಿರುವ ತನಿಖಾ ತಂಡ, ತೀವ್ರ ವಿಚಾರಣೆ ನಡೆಸುತ್ತಿದೆ. ಐಯನ್ ರೆಡ್ಡಿ ಈ ಹಿಂದೆ ಮುನಿರತ್ನ ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ್ದರು ಎನ್ನುವ ಮಾಹಿತಿ ಸಿಕ್ಕಿದೆ.
ಎಸ್ ಐಟಿ ತಂಡ ಸಂತ್ರಸ್ತೆ ಹಾಗೂ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ವಿಚಾರಣೆ ನಡೆಸಿತ್ತು. ಈ ವೇಳೆ ಮಾಜಿ ಕಾಪೋರೇಟರ್ ವೇಲು ಇನ್ಸ್ಪೆಕ್ಟರ್ ವಿರುದ್ದ ಮಾಹಿತಿ ನೀಡಿದ್ದರು. ಇದೇ ಮಾಹಿತಿ ಆಧರಿಸಿ ಐಯನ್ ರೆಡ್ಡಿಯನ್ನು ವಶಕ್ಕೆ ಪಡೆದಿರುವ ಎಸ್ ಐಟಿ ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದೆ. ಮುನಿರತ್ನ ನಡೆಸುತ್ತಿದ್ದ ಹನಿಟ್ರ್ಯಾಪ್ ದಂಧೆಗೆ ಇನ್ಸ್ಪೆಕ್ಟರ್ ನೆರವು ನೀಡಿದ್ದಾರೆ. ಅಲ್ಲದೇ ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ ಮಾಹಿತಿ ಬಚ್ಚಿಟ್ಟಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ಹೆಬ್ಬಗೋಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಐಯನ್ ರೆಡ್ಡಿಯನ್ನು ವಶಕ್ಕೆ ಪಡೆಯಲಾಗಿದೆ.