ಕಲಘಟಗಿ: ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗಾಗಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತರ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತ ಸಂಘಟನೆಗಳಿಂದ ನ.26ರಂದು ಮೌನ ಪ್ರತಿಭಟನೆ ನಡೆಸಿ ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದು ರೈತ ಮುಖಂಡ ಪರಶುರಾಮ ಎತ್ತಿನಗುಡ್ಡ ತಿಳಿಸಿದ್ದಾರೆ.
‘ದೇಶದ ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಧಲೆವಾಲಾ ನ.26ರಿಂದ ಆಮರಣಾಂತ ಸತ್ಯಾಗ್ರಹ ಉಪವಾಸ ಹಮ್ಮಿಕೊಂಡಿದ್ದಾರೆ. ಇದು ರೈತರ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ದೇಶಾದ್ಯಂತ ಎಲ್ಲ ರೈತ ಸಂಘಟನೆಗಳು ಬೆಂಬಲಸೂಚಿಸುತ್ತಿವೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Health Tips: ಬೂದುಕುಂಬಳ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?
‘ಕೇಂದ್ರ ಎಚ್ಚೆತ್ತುಕೊಳ್ಳದಿದ್ದರೆ ರಾಜ್ಯದಲ್ಲಿಯೂ ದೆಹಲಿ ಹೋರಾಟ ಬೆಂಬಲಿಸಿ ಸಹಸ್ರಾರು ಸಂಖ್ಯೆಯ ರೈತರು ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ. ದೆಹಲಿ ರೈತ ಮುಖಂಡರ ಪ್ರಾಣಕ್ಕೆ ಅಪಾಯ ಆದರೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಮತ್ತು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ, ಸರ್ಕಾರ
“ಬಾಗಲಕೋಟೆ, ಕಲಬುರಗಿ ಇನ್ನಿತರ ಜಿಲ್ಲೆಗಳಲ್ಲಿ ಕಬ್ಬಿಗೆ ಎಫ್ಆರ್ಪಿ ಮೇಲೆ ಹೆಚ್ಚುವರಿ ದರ ನಿಗದಿ ಮಾಡಬೇಕೆಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಅಧಿವೇಶನಕ್ಕೂ ಮೊದಲೇ ಮುಖ್ಯಮಂತ್ರಿಯವರು ರೈತ ಮುಖಂಡರ ಸಭೆ ಕರೆದು ರಾಜ್ಯದಾದ್ಯಂತ ಇರುವ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿದ್ದಾರೆ.