ದೊಡ್ಡಬಳ್ಳಾಪುರ: ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು (ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ಒಟ್ಟು 13 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
‘ಮಾಂಗಲ್ಯ ಭಾಗ್ಯ’ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗಿತ್ತು.
ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗಿತ್ತು. ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶೀಲ್ದಾರ್ ಜೆ.ಜೆ.ಹೇಮಾವತಿ, ನಂಜಪ್ಪ ಸೇರಿದಂತೆ ಸಿಬ್ಬಂದಿ ವರ್ಗ ಇತರರು ಉಪಸ್ಥಿತರಿದ್ದರು.