ಅನುಮತಿ ಇಲ್ಲದೆ ಬೀದಿ ಬದಿಯಲ್ಲಿ ಕಾರ್ಯಕ್ರಮ ನಡೆಸುತ್ತಿದ್ದ ಇಂಗ್ಲೆಂಡ್ ಮೂಲದ ಖ್ಯಾತ ಗಾಯಕ ಎಡ್ ಶೀರನ್ ಅವರ ಗಾಯನ ಪ್ರದರ್ಶನವನ್ನು ಬೆಂಗಳೂರು ಪೊಲೀಸರು ಸ್ಥಗಿತಗೊಳಿಸಿದ್ದಾರೆ.
ಎಡ್ ಶೀರನ್ ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ‘ಶೇಫ್ ಆಫ್ ಯು’ ಹಾಡನ್ನು ಉತ್ಸಾಹದಿಂದ ಹಾಡುತ್ತಾ ಪ್ರದರ್ಶನ ನೀಡುತ್ತಿದ್ದರು. ಅನುಮತಿ ಪಡೆಯದೇ ಹಾಡಿದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ಗಾಯನ ಪ್ರದರ್ಶನಕ್ಕೆ ಬ್ರೇಕ್ ಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಮೈಕ್ ಫ್ಲಗ್ ಕಿತ್ತು ಕಾರ್ಯಕ್ರಮ ರದ್ದುಗೊಳಿಸಿದ್ದಾರೆ.
ಎಡ್ ಶೀರನ್ ಗಾಯನಕ್ಕೆ ಪೊಲೀಸರು ಬ್ರೇಕ್ ಹಾಕಿದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ಹೊರಹಾಕಿದ್ದಾರೆ.