ಮಹಮ್ಮದ್ ಸಿರಾಜ್ ಮಾರಕ ದಾಳಿಗೆ ಭಾರತ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡ 55 ರನ್ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದೆ.
ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಡೀನ್ ಎಲ್ಗರ್ ನಾಯತ್ವದ ದಕ್ಷಿಣ ಆಫ್ರಿಕಾ ತಂಡ 23.2 ಓವರ್ಗಳಲ್ಲಿ ಕೇವಲ 55 ರನ್ಗಳಿಗೆ ಆಲೌಟ್ ಆಗಿ ಮೊದಲ ಇನ್ನಿಂಗ್ಸ್ ಮುಗಿಸಿದೆ.
ಇನ್ಸಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ಪರ ಡೇವಿಡ್ ಬೆಡಿಂಗ್ಹ್ಯಾಮ್ (12) ಮತ್ತು ಕೈಲ್ ವೆರೆನ್ನೆ (15) ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್ಮನ್ಗಳು ಯಾರೂ ಎರಡಂಕಿ ದಾಟಲಿಲ್ಲ. 6 ವಿಕೆಟ್ಗಳನ್ನು ಕಬಳಿಸಿದ ಸಿರಾಜ್, ಮತ್ತೊಮ್ಮೆ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ.
ಸಿರಾಜ್ ವೇಗಕ್ಕೆ ಜೊತೆಯಾದ ಜಸ್ಪ್ರೀತ್ ಬೂಮ್ರಾ ಮತ್ತು ಮುಖೇಶ್ ಕುಮಾರ್ ಕೂಡಾ ತಲಾ ಎರಡು ವಿಕೆಟ್ ಪಡೆದರು.
9 ಓವರ್ ಬೌಲಿಂಗ್ ಮಾಡಿದ ಸಿರಾಜ್ 6 ವಿಕೆಟ್ ಕಬಳಿಸಿ 15 ರನ್ ಮಾತ್ರ ಕೊಟ್ಟುರು.